ಲೈಂಗಿಕ ಕಿರಿಕುಳ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಜಿ ಸಚಿವ ಹಾಗೂ ಶಾಸಕ ಹೆಚ್ ಡಿ ರೇವಣ್ಣ ನಿವಾಸಕ್ಕೆ ಸಂತ್ರಸ್ತ ಮಹಿಳೆಯನ್ನ ಕರೆತಂದು ಎಸ್ ಐಟಿ ಅಧಿಕಾರಿಗಳು ಸ್ಥಳ ಮಹಜರು ನಡೆಸಿದ್ದಾರೆ.
ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಸಂತ್ರಸ್ತ ಮಹಿಳೆ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ವಿಚಾರಣೆ ನಡೆಸುತ್ತಿರುವ ಎಸ್ ಐಟಿ ಇದೀಗ ಸಂತ್ರಸ್ತ ಮಹಿಳೆಯನ್ನ ಬಸವನಗುಡಿಯಲ್ಲಿರುವ ಹೆಚ್ ಡಿ ರೇವಣ್ಣ ನಿವಾಸಕ್ಕೆ ಕರೆತಂದು ಸ್ಥಳ ಮಹಜರು ನಡೆಸುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಮನೆಗೆ ಯಾರೂ ಪ್ರವೇಶಿಸದಂತೆ ಬ್ಯಾರಿಕೇಡ್ ಹಾಕಿ ಭದ್ರತೆ ವಹಿಸಲಾಗಿದೆ.