ಮೈಸೂರು : ಪ್ರಜ್ವಲ್ ರೇವಣ್ಣ ಪ್ರಕರಣ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಆಗಿದೆ.
ಈ ಪ್ರಕರಣವನ್ನ ಅಶೋಕ್ ಸೇರಿದಂತೆ ಹಲವರು ಡಿಕೆ ಶಿವಕುಮಾರ್ ಮೇಲೆ ಹೊರಿಸುತ್ತಿದ್ದಾರೆ.
ಇದು ಬಿಜೆಪಿ ಜೆಡಿಎಸ್ ನಾಯಕರ ನಾಚಿಕೆಗೇಡಿನ ಸಂಗತಿ.
ಈ ಪ್ರಕರಣವನ್ನ ಬಿಜೆಪಿಯವರು ರಾಜಕೀಯವಾಗಿ ಬಳಸಿಕೊಳ್ಳಲಿಕ್ಕೆ ಬಿಜೆಪಿ ಮುಂದಾಗಿದೆ ಎಂದು ಮೈಸೂರು ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಹೇಳಿದರು.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಸುಮ್ಮನಿದ್ದ ಬಿಜೆಪಿಯವರು ದೇವರಾಜೇಗೌಡ ಹೇಳಿಕೆ ಬಳಿಕ ಅಲರ್ಟ್ ಆಗಿದ್ದಾರೆ.
ಮೊದಲು ದೇವರಾಜೇಗೌಡನನ್ನ ಬಂಧಿಸಿ ಮಂಪರು ಪರೀಕ್ಷೆಗೆ ಒಳಪಡಿಸಬೇಕು.
ವಿಡಿಯೋ ಮಾಡಿದ್ದು ಪ್ರಜ್ವಲ್ ರೇವಣ್ಣ.
ವಿಡಿಯೋ ತಕೊಂಡಿದ್ದು ಕಾರ್ತಿಕ್,ದೇವರಾಜೇಗೌಡ ಮೂಲಕ ವಿಡಿಯೋ ರಿಲೀಸ್ ಆಗಿದೆ.
ಇದರ ನಡುವೆ ಡಿಕೆ ಶಿವಕುಮಾರ್ ಪಾತ್ರ ಏನಿದೆ ಎಂದರು.
ಡಿಸೆಂಬರ್ 23 ರಂದು ವಿಜಯೇಂದ್ರ ಮೂಲಕ ಬಿಜೆಪಿ ಹೈಕಮಾಂಡ್ ಗೆ ಪೆನ್ ಡ್ರೈವ್ ತಲುಪಿತ್ತು.
ಅಭ್ಯರ್ಥಿ ಬದಲಾವಣೆ ಮಾಡಬೇಕೆಂದು ಹೇಳಿದ್ರೋ ಇಲ್ಲವೋ.ಈಗಿದ್ದರು ಕೂಡ ನೀವು ಪ್ರಜ್ವಲ್ ಕೈ ಮೇಲೆತ್ತಿ ಪ್ರಚಾರ ಮಾಡಿದ್ರಿ.ಮೈಸೂರಲ್ಲಿ ಮೋದಿಯವರು ಪ್ರಜ್ವಲ್ ಪರ ಕ್ಯಾಂಪೆನ್ ಮಾಡಿದ್ರು.ಇದೇನಾ ನಿಮ್ಮ ನೈತಿಕತೆ.
ದೇವೇಗೌಡರು ಒಕ್ಕಲಿಗ ಸಮುದಾಯದ ಪ್ರಶ್ನತೀತ ನಾಯಕ.ಇಂತಹ ನಾಯಕರ ಮಕ್ಕಳು, ಮೊಮ್ಮಕ್ಕಳಾಗಿ ನೀವು ಮಾಡುತ್ತಿರುವ ಕೆಲಸ ಏನು.
ಇಳಿ ವಯಸ್ಸಿನಲ್ಲಿ ದೇವೇಗೌಡರಿಗೆ ನೋವುಂಟು ಮಾಡ್ತಿದ್ದೀರಲ್ಲ ಸರಿನಾ ಎಂದು ಪ್ರಶ್ನೆ ಮಾಡಿದರು.
ಒಕ್ಕಲಿಗ ಸಮುದಾಯದ ರಕ್ಷಣೆ ಮಾಡ್ತೀವಿ ಅಂತೀರಾ.
ಒಕ್ಕಲಿಗ ಸಮುದಾಯದ ಹೆಣ್ಮಕ್ಕಳು ಆ ವಿಡಿಯೋದಲ್ಲಿ ಇದ್ದಾರಲ್ಲ ಇದಕ್ಕೇನು ಹೇಳ್ತೀರಾ.
ಎಸ್ ಐಟಿ ಮೇಲೆ ನಿಮಗೆ ನಂಬಿಕೆ ಇಲ್ಲ ಅಂದ್ರೆ ಸಿಬಿಐ,ಎನ್ ಐಎ,ಸೇರಿದಂತೆ ಯಾವುದೇ ಇನ್ವೆಸ್ಟಿಗೆಷನ್ ಟೀಮ್ ಗೆ ಪ್ರಕರಣ ವಹಿಸಿ.
ಬಿಜೆಪಿ ಜೆಡಿಎಸ್ ನೀವು ಮೈತ್ರಿ ಮಾಡಿಕೊಂಡಿದಿರಲ್ಲ ನೀವೇ ಸಿಬಿಐ ಗೆ ಈ ಕೇಸ್ ವಹಿಸಿ ಎಂದು ಎಂ ಲಕ್ಷ್ಮಣ್ ಹೇಳಿದರು.