ಮಂಡ್ಯ : ಶಾರ್ಟ್ ಸರ್ಕ್ಯೂಟ್ ನಿಂದ ಡಿಟಿಪಿ ಸೆಂಟರ್ ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಲಕ್ಷಾಂತರ ಮೌಲ್ಯದ ಪದಾರ್ಥಗಳು ನಾಶವಾದ ಘಟನೆ
ಮದ್ದೂರು ಪಟ್ಟಣದ ತಾಲ್ಲೂಕು ಕಚೇರಿ ಬಳಿ ನಡೆದಿದೆ.
ಬೆಳ್ಳಂಬೆಳಿಗ್ಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಅಂಗಡಿ ಮಳಿಗೆಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಪ್ರಸನ್ನ ಎಂಬುವವರಿಗೆ ಸೇರಿ ಡಿಟಿಪಿ ಸೆಂಟರ್.
ಬೆಂಕಿಯಿಂದಾಗಿ ಅಂಗಡಿ ಮಳಿಗೆಯಲ್ಲಿದ್ದ ಕಂಪ್ಯೂಟರ್, ಜೆರಾಕ್ಸ್ ಮಿಷನ್ ಸೇರಿ ಬೆಲೆಬಾಳುವ ವಸ್ತುಗಳು ಬೆಂಕಿಗಾಹುತಿಯಾಗಿದೆ.
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸಿದ್ದಾರೆ.