ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ಮತ್ತೆ ಕೋಟ್ಯಾಧೀಶ ನಾಗಿದ್ದಾನೆ. ಶ್ರೀ ನಂಜುಂಡೇಶ್ವರಸ್ವಾಮಿ ದೇವಾಲಯದಲ್ಲಿ ನಡೆದ ಹುಂಡಿ ಎಣಿಕೆ ಕಾರ್ಯದಲ್ಲಿ 1.72 ಕೋಟಿ ರೂ ನಗದು , 92 ಗ್ರಾಂ 50 ಮಿಲಿಗ್ರಾo ಚಿನ್ನ ಹಾಗೂ 3 ಕೆಜಿ 500 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ.
ನಿನ್ನೆ ದೇವಾಲಯದ ದಾಸೋಹ ಭವನದ ಆವರಣದಲ್ಲಿ ಒಟ್ಟು 35 ಹುಂಡಿಗಳನ್ನ ತೆಗೆದು ಎಣಿಕೆ ಮಾಡಲಾಯ್ತು. ಈ ವೇಳೆ 1.72, 85, 296 ಸಂಗ್ರಹವಾಗಿದೆ. ಹಾಗೂ 33 ವಿದೇಶಿ ಕರೆನ್ಸಿ ಸಹ ಕಾಣಿಕೆಯಾಗಿ ಬಂದಿದೆ.
. ಹುಣ್ಣಿಮೆ ಸೇರಿದಂತೆ ವಿಶೇಷ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ದೇಗುಲಕ್ಕೆ ಭೇಟಿ ನೀಡಿದ್ದರಿಂದ ಹುಂಡಿಯಲ್ಲಿ ಈ ಮೊತ್ತದ ಹಣದ ಮೊತ್ತ ಸಂಗ್ರಹವಾಗಿದೆ.
ಎಣಿಕೆ ಕಾರ್ಯದಲ್ಲಿ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ್ ಕುಮಾರ್, ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸತೀಶ್, ವೆಂಕಟೇಶ್ ಪ್ರಸಾದ್, ಧಾರ್ಮಿಕ ದತ್ತಿ ಇಲಾಖೆಯ ತಹಶೀಲ್ದಾರ್ ವಿದುಲತಾ, ಬ್ಯಾಂಕ್ ಆಫ್ ಬರೋಡಾ ಮ್ಯಾನೇಜರ್ ಕಾರ್ತಿಕ್ ಸೇರಿದಂತೆ ಸ್ವಸಹಾಯ ಸಂಘದ ಮಹಿಳೆಯರು ಸಹ ಎಣಿಕೆ ಕಾರ್ಯದಲ್ಲಿ ಭಾಗವಹಿಸಿದ್ದರು.