ಮೈಸೂರು : ಕಲುಷಿತ ನೀರು ಕುಡಿದು ಯುವಕ ಸಾವನ್ನಪ್ಪಿದ ಘಟನೆ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಕೆ.ಸಾಲುಂಡಿ ಗ್ರಾಮದಲ್ಲಿ ನಡೆದಿದೆ. ಕನಕರಾಜ್ (20) ಸಾವನ್ನಪ್ಪಿದ ಯುವಕ.ನಿನ್ನೆ ತೀವ್ರ ವಾಂತಿ ಬೇದಿಯಿಂದ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ ಕನಕರಾಜ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು.ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ
ಕೆ.ಸಾಲುಂಡಿ ಗ್ರಾಮಕ್ಕೆ ವೈದ್ಯರ ತಂಡ ಭೇಟಿ ನೀಡಿದ್ದಾರೆ.ಗ್ರಾಮದಲ್ಲೇ ಬಿಡು ಬಿಟ್ಟಿದ್ದಾರೆ.
ನಿನ್ನೆ ಸಂಜೆ ಕಲುಷಿತ ನೀರು ಸೇವಿಸಿ ಹಲವರಿಗೆ ವಾಂತಿ, ಬೇದಿ ಕಾಣಿಸಿಕೊಂಡಿತ್ತು.ಗ್ರಾಮದ ಜನರಿಗೆ ವೈದ್ಯರು ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ. ಮುಂಜಾಗೃತ ಕ್ರಮವಾಗಿ ಗ್ರಾಮದಲ್ಲೇ ಅಂಬುಲೆನ್ಸ್ ನಿಯೋಜಿಸಲಾಗಿದೆ. ಆರೋಗ್ಯ ಸಮಸ್ಯೆ ಕಾಣಿಸಿಕೊಂಡರೆ ತಕ್ಷಣ ಆಸ್ಪತ್ರೆಗೆ ರವಾನಿಸಲು ವೈದ್ಯರ ಸಿದ್ಧತೆ ನಡೆಸಿದ್ದಾರೆ.
ಈಗಾಗಲೇ 15 ಮಂದಿ ನಗರದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗ್ರಾಮದಲ್ಲಿನ ಆರೋಗ್ಯ ವ್ಯತ್ಯಯದ ಬಗ್ಗೆ ಶಾಸಕ ಜಿ.ಟಿ ದೇವೇಗೌಡ ಮಾಹಿತಿ ಪಡೆದಿದ್ದಾರೆ.