ಕಲುಷಿತ ನೀರು ಸೇವನೆ ಘಟನೆ ನಡೆದ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆ. ಸಾಲುಂಡಿ ಗ್ರಾಮಕ್ಕೆ ಶಾಸಕರು ಹಾಗೂ ರಾಜ್ಯ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರು ಆದ ಜಿ ಟಿ ದೇವೇಗೌಡರು ಭೇಟಿ ಕೊಟ್ಟು ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಪ್ರತಿ ಮನೆ ಮನೆಗೂ ಭೇಟಿ ನೀಡಿ ತಪಾಸಣೆ ನಡೆಸಿ, ಗ್ರಾಮಸ್ಥರಿಗೆ ಧೈರ್ಯ ತುಂಬುವಂತಾಗಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು…ಪಟ್ಟಣ ಪಂಚಾಯತ್ ಅಧಿಕಾರಿಗಳಿಗೆ ಗ್ರಾಮದಲ್ಲಿ ಸ್ವಚ್ಛತೆ ಕಡೆ ಗಮನ ಹರಿಸುವಂತೆ, ಕುಡಿಯುವ ನೀರಿನ ಟ್ಯಾಂಕ್ ಸ್ವಚ್ಛತೆ ಮಾಡಿ, ಅಲ್ಲಿಯ ತನಕ ಟ್ಯಾಂಕ್ ಮೂಲಕ ಕುಡಿಯುವ ನೀರನ್ನು ಪೂರೈಸುವಂತೆ ಸೂಚನೆ ನೀಡಿದರು…ಜಿಲ್ಲಾ ಆರೋಗ್ಯ ಅಧಿಕಾರಿಯಾದ ಡಾ. ಕುಮಾರಸ್ವಾಮಿ, ತಹಸೀಲ್ದಾರ್ ಮಹೇಶ್, ಪಟ್ಟಣ ಪಂಚಾಯತ್ ಮುಖ್ಯಧಿಕಾರಿ ಕುರಿಯಾಕೋಸ್ ಬಾಬು, ಜೆಡಿಎಸ್ ಅಧ್ಯಕ್ಷರಾದ ಹಿನಕಲ್ ರಾಜು, ಮುಖಂಡರುಗಳಾದ ರಮೇಶ್ ಕಳ್ಳಿಪಾಳ್ಯ, ರಾಜು ಶಶಿ ಉಪಸ್ಥಿತರಿದ್ದರು..