ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆಗಿನ ವಿಡಿಯೋ ಸಂವಾದದಲ್ಲಿ ಸಿಎಂ ಅವರ ಆರಂಭಿಕ ಮಾತುಗಳು….
ಚುನಾವಣಾ ನೀತಿ ಸಂಹಿತೆ ಸಮಯ ಈ ಬಾರಿ ದೀರ್ಘವಾಗಿತ್ತು. ಇದರಿಂದ ಆಡಳಿತ ಯಂತ್ರ ಸ್ಥಗಿತವಾದಂತೆ ಆಗಿತ್ತು.
ಅಭಿವೃದ್ಧಿ ಕೆಲಸಗಳಿಗೆ ಗಮನ ಹರಿಸಲು ಅಧಿಕಾರಿಗಳಿಂದ ಸಾಧ್ಯ ಆಗಿರಲಿಲ್ಲ.
ನಮ್ಮ ಮನವಿ ಮೇರೆಗೆ ಚುನಾವಣಾ ಆಯೋಗ ನೀತಿ ಸಂಹಿತೆ ಸಡಿಲಿಸಿದೆ.
ಈಗ ಮಳೆ ವಾಡಿಕೆಗಿಂತ ಅಧಿಕವಾಗಿದೆ.
ಕೃಷಿ ಚಟುವಟಿಕೆ ಆರಂಭವಾಗಿದೆ. ಚುನಾವಣಾ ಸಿದ್ಧತೆ ಜನವರಿಯಲ್ಲೇ ಶುರುವಾಗಿತ್ತು.
ನೀತಿ ಸಂಹಿತೆ ಜೂನ್ ಆರರ ವರೆಗೆ ಇದೆ. ಆದರೂ ತುರ್ತು ಕೆಲಸಗಳಿಗೆ ಗಮನ ನೀಡಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು.
ಬಜೆಟ್ ಘೋಚಣೆಗಳಿಗೆ ಸಂಬಂಧಿಸಿದಂತೆ ಜೂನ್ ಕೊನೆಯ ವೇಳೆಗೆ ಆದೇಶ ಹೊರ ಬರಬೇಕು. ಕಾಮಗಾರಿಗಳಿಗೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆ ಕೂಡ ಶೀಘ್ರವಾಗಿ ಆಗಬೇಕು.
ಚುನಾವಣೆ ಮುಗಿದಿದೆ. ನೀತಿ ಸಂಹಿತೆ ಸಡಿಲವಾಗಿದೆ. ಹೀಗಾಗಿ ಅಧಿಕಾರಿಗಳು ಅಭಿವೃದ್ಧಿ ಕಡೆ ಹೆಚ್ಚಿನ ಗಮನ ಹರಿಸಬೇಕು.
ಮೈಸೂರಿನ ಎರಡು ಗ್ರಾಮಗಳಲ್ಲಿ ಕಾಲರಾ ಕಂಡು ಬಂದಿದೆ. ಇದಕ್ಕೆ ಕಾರಣ ಕಲುಷಿತ ನೀರು. ನೀರು ಕಲುಷಿತಗೊಳ್ಳಲು ಇಂಜಿನಿಯರುಗಳು ಕಾರಣ. ಕುಡಿಯಲು ನೀರು ಯೋಗ್ಯವೇ ಅಲ್ಲವೇ ಎಂಬುದನ್ನು ಪತ್ತೆ ಮಾಡದಿರುವುದು ದೊಡ್ಡ ಅಪರಾಧ.
ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ರೀತಿಯ ಘಟನೆ ಸಂಭವಿಸಿದೆ. ಇದಕ್ಕೆ ಯಾರು ಜವಾಬ್ದಾರಿ. ಕುಡಿಯುವ ನೀರಿನ ಪರೀಕ್ಷೆ ನಿತ್ಯವೂ ಆಗಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳೇ ಇದಕ್ಕೆ ಹೊಣೆ. ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಲಾಗುವುದು.
ಇನ್ನು ಮುಂದೆ ಕಲುಷಿತ ನೀರಿನಿಂದ ತೊಂದರೆ ಆದರೆ ಡಿಸಿಗಳೇ ನೇರ ಹೊಣೆ. ಕಾಲರ ಕಂಡು ಬಂದರೆ ಸಂಬಂಧಿಸಿದ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿ ಕ್ರಮ ಜರುಗಿಸಲಾಗುವುದು.